ಕೇಂದ್ರ ಸರ್ಕಾರದ ನಿರ್ಭಯಾ ಯೋಜನೆಯಡಿ ನಿರ್ಮಾಣವಾಗಿರುವ ಬೆಂಗಳೂರು ಸೇಫ್ ಸಿಟಿ ನಿಯಂತ್ರಣ ಕೋಣೆಯ ವಿಶೇಷತೆಗಳ ಕುರಿತು ನಗರ ಪೊಲೀಸ್ ಆಯುಕ್ತ ಸಿ.ಎಚ್.ಪ್ರತಾಪ್ ರೆಡ್ಡಿ ಮಾಹಿತಿ ನೀಡಿದ್ದಾರೆ. ನಿರ್ಭಯಾ ಪ್ರಕರಣದ ಬಳಿಕ ದೇಶದ ಮಹಾನಗರಗಳಲ್ಲಿ ನಿರ್ಮಾಣವಾಗುತ್ತಿರುವ ಸೇಫ್ ಸಿಟಿ ಯೋಜನೆಯ ಮೊದಲ ಹಂತದ ಸಿದ್ದತೆ ಬೆಂಗಳೂರು ನಗರದಲ್ಲಿ ಪೂರ್ಣಗೊಂಡಿದ್ದು ಕಳೆದ ವಾರವಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಉದ್ಘಾಟನೆ ನಡೆಸಿದ್ದರು. ಯೋಜನೆಯಲ್ಲಿ ನಗರದಾದ್ಯಂತ 4100 ಕ್ಯಾಮೆರಾಗಳನ್ನ ಅಳವಡಿಸಲಾಗಿದ್ದು ಇನ್ನೂ