ಹೊಸ ವರ್ಷಕ್ಕೆ ಕೆಲವೇ ದಿನಗಳು ಬಾಕಿ ಹಿನ್ನಲೆಯಲ್ಲಿ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳು ಸಭೆ ನಡೆಸಿದ್ರು. ನಗರ ಪೊಲೀಸ್ ಆಯುಕ್ತ ಸಿ.ಹೆಚ್.ಪ್ರತಾಪ್ ರೆಡ್ಡಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸುಬ್ರಮಣೇಶ್ವರ ರಾವ್, ಸಂದೀಪ್ ಪಾಟೀಲ್, ಡಿಸಿಪಿಗಳು ಭಾಗಿಯಾಗಿದ್ರು.ಹೊಸ ವರ್ಷಕ್ಕೆ ಬೆಂಗಳೂರು ಕೇಂದ್ರ ವಿಭಾಗದ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಗಳಲ್ಲಿ ಹೆಚ್ಚಿನ ಜನಸಮೂಹ ಸೇರಲಿದ್ದು, ಕೈಗೊಳ್ಳಬೇಕಾದ ಅಗತ್ಯ ಭದ್ರತಾ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ..