ಬೆಂಗಳೂರು : ಪೊಲೀಸ್ ಇಲಾಖೆಯನ್ನು ಕೇಸರೀಕರಣಗೊಳ್ಳಲು ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಈ ವೇಳೆ ಪೊಲೀಸ್ ಅಧಿಕಾರಿಗಳಿಗೆ ಡಿಸಿಎಂ ಕ್ಲಾಸ್ ತೆಗೆದುಕೊಂಡಿದ್ದಾರೆ. ಇಷ್ಟು ದಿನ ಪೊಲೀಸರು ಬಿಜೆಪಿ ಪರ ಕೆಲಸ ಮಾಡಿದ್ದು ಗೊತ್ತಿದೆ. ನಾಲ್ಕು ವರ್ಷಗಳ ನಿಮ್ಮ ವರ್ತನೆಗಳು ನಮಗೆ ತಿಳಿದಿದೆ.