ಆತ್ಮರಕ್ಷಣೆಗಾಗಿ ರೌಡಿ ಶೀಟರ್ ಗಳ ಮೇಲೆ ಗುಂಡು ಹಾರಿಸಿದ ಪೊಲೀಸರು

ಬೆಂಗಳೂರು| pavithra| Last Modified ಸೋಮವಾರ, 13 ಜನವರಿ 2020 (10:16 IST)
ಬೆಂಗಳೂರು : ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಹಿನ್ನಲೆಯಲ್ಲಿ  ಇಬ್ಬರು ರೌಡಿ ಶೀಟರ್ ಗಳ  ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ ಘಟನೆ ಇಂದು ಬೆಳಿಗ್ಗೆ ಬಿಟಿಎಂ ಲೇಔಟ್ ನ ರಂಕಾ ಕಾಲೋನಿ ಬಳಿ ನಡೆದಿದೆ.ಹಂದಿ ಮಹೇಶ್ ಮತ್ತು ಸತೀಶ್ ಪೊಲೀಸರ ಗುಂಡಿನ ದಾಳಿಗೆ ಒಳಗಾದವರು. ಇವರಿಬ್ಬರ ಮೇಲೆ ಸಾಕಷ್ಟು ಪ್ರಕರಣಗಳು ದಾಖಲಾದ ಹಿನ್ನಲೆಯಲ್ಲಿ ಅವರನ್ನು  ಪೊಲೀಸರು ಹಿಡಿಯಲು ಹೋದಾಗ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ಮಾಡಲು ಮುಂದಾಗಿದ್ದಾರೆ. ಆಗ ಪೊಲೀಸರು ತಮ್ಮ ರಕ್ಷಣೆಗಾಗಿ ಇಬ್ಬರ ಮೇಲೆ ಗುಂಡು ಹಾರಿಸಿದ್ದಾರೆ.  


ಈ ಘಟನೆಯಲ್ಲಿ ಪೊಲೀಸ್ ಪೇದೆಯೊಬ್ಬರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಮೈಕೋ ಲೇಔಟ್ ಠಾಣೆಯಲ್ಲಿ ದಾಖಲಾಗಿದೆ. ಇದರಲ್ಲಿ ಇನ್ನಷ್ಟು ಓದಿ :