ಪತ್ರಕರ್ತ ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿದಂತೆ ನೀಡಿದ ವಿವಾದಾತ್ಮಕ ಟೀಕೆಗಳಿಗಾಗಿ ಬಿಜೆಪಿ ಶೃಂಗೇರಿ ಶಾಸಕ ಡಿ ಎನ್ ಜೀವರಾಜ್ ವಿರುದ್ಧ ಹಲವು ಸಂಘಟನೆಗಳು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿವೆ. ಕೊಪ್ಪ ಪಟ್ಟಣದಲ್ಲಿ ಬಿಜೆಪಿ ಯುವ ಮೋರ್ಚಾದ ಮಂಗಳೂರು ಚಲೋ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಜೀವರಾಜ್, ಗೌರಿ ಲಂಕೇಶ್ ತಮ್ಮ ಪತ್ರಿಕೆಯಲ್ಲಿ ಚಡ್ಡಿಗಳ ಮಾರಣಹೋಮ ಎನ್ನುವ ಶಬ್ದಗಳನ್ನು ಬಳಸದಿದ್ದಲ್ಲಿ ಜೀವಂತವಾಗಿರುತ್ತಿದ್ದರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ತಾಲೂಕು