ಬೆಂಗಳೂರು : ಮಹಿಳಾ ಹೋಂಗಾರ್ಡ್ ಮೇಲೆ ಪೊಲೀಸ್ ಠಾಣೆಯ ಮುಖ್ಯಪೇದೆ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯ ಮುಖ್ಯಪೇದೆ ಚಂದ್ರಶೇಖರ್ ಅತ್ಯಾಚಾರ ಎಸಗಿದ ಆರೋಪಿಯಾಗಿದ್ದು, ಈತ ಜ್ಞಾನಭಾರತಿ ಯುನಿವರ್ಸಿಟಿಯಲ್ಲಿ ಹೋಮ್ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕೆಲಸ ಮುಗಿದ ನಂತರ ಡ್ರಾಪ್ ನೀಡುವ ನೆಪದಲ್ಲಿ ಆಕೆಯ ಜೊತೆ ಸ್ನೇಹ ಬೆಳೆಸಿಕೊಂಡಿದ್ದ. ಈ ಸಲುಗೆಯನ್ನು ದುರ್ಬಳಕೆ ಮಾಡಿಕೊಂಡ ಚಂದ್ರಶೇಖರ್ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.