ಸಿದ್ದರಾಮಯ್ಯ ನಿವಾಸಕ್ಕೆ ಭದ್ರತೆ ಒದಗಿಸಿರುವ ರಾಜ್ಯ ಸರ್ಕಾರ ಇದೀಗ ಇನ್ನಷ್ಟು ಮುಂಜಾಗ್ರತ ಕ್ರಮ ಕೈಗೊಂಡಿದೆ. ಶಿವಾನಂದ ವೃತ್ತದ ಸಮೀಪ ಇರುವ ಸಿದ್ದರಾಮಯ್ಯ ಸರ್ಕಾರಿ ನಿವಾಸಕ್ಕೆ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಾಗಿದೆ. ಸಿದ್ದರಾಮಯ್ಯಗೆ ಜೀವ ಬೆದರಿಕೆ ಹಾಗೂ ಮೊಟ್ಟೆ ಎಸೆತ ಪ್ರಕರಣದ ಹಿನ್ನೆಲೆಯಲ್ಲಿ ಈ ಭದ್ರತೆ ಒದಗಿಸಿದ್ದು, ಪ್ರತಿಪಕ್ಷ ನಾಯಕರ ನಿವಾಸಕ್ಕೆ ಸದಾ ಸಾರ್ವಜನಿಕರ ಭೇಟಿ ಇರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ಭದ್ರತೆ ಹೆಚ್ಚಿಸುವ ಆದೇಶದ ಬಳಿಕ ಒಂದೊಂದೇ ಸವಲತ್ತುಗಳನ್ನು