ಇತ್ತೀಚಿನ ದಿನಗಳಲ್ಲಿ ಬದಲಾದ ಜೀವನ ಶೈಲಿಯಿಂದ ದೇಹದಲ್ಲಿ ಕೊಬ್ಬಿನಾಂಶ ಹೆಚ್ಚಾಗುತ್ತಿದೆ. ಇದರೊಂದಿಗೆ ದೇಹದ ತೂಕವೂ ಹೆಚ್ಚಾಗಿ ಅನೇಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಆದ್ರೆ ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು 8 ತಿಂಗಳಲ್ಲಿ ಬರೋಬ್ಬರಿ 46 Kg ತೂಕ ಇಳಿಸಿಕೊಂಡು ಇಲಾಖೆಯಲ್ಲಿ ಭಾರೀ ಪ್ರಶಂಸೆ ಪಡೆದಿದ್ದಾರೆ. 130 Kg ತೂಕವಿದ್ದ ಮೆಟ್ರೋ ಉಪ ಪೊಲೀಸ್ ಆಯುಕ್ತ ಜಿತೇಂದ್ರ ಮಣಿ, ಅನೇಕ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗಿದ್ದರು. ಆದ್ರೆ ಬದುಕನ್ನು ಸವಾಲಾಗಿ ಸ್ವೀಕರಿಸಿದ ಜೀತೆಂದ್ರ ಮಣಿ