ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ, ಮಾಜಿ ಸಚಿವ ಅಂಬರೀಶ್ ನಿಧನಕ್ಕೆ ರಾಜಕೀಯ ರಂಗದ ಹಲವು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು , ಹಿರಿಯ ನಟ, ಮಾಜಿ ಸಚಿವ ಮತ್ತು ದೀರ್ಘಕಾಲದ ನನ್ನ ಗೆಳೆಯ ಅಂಬರೀಷ್ ಅವರ ಸಾವು ದಿಗ್ಭ್ರಮೆ ಉಂಟು ಮಾಡಿದೆ. ತೀರಾ ಅನಿರೀಕ್ಷಿತ ಸಾವು. ಚಿತ್ರರಂಗ ಮತ್ತು ರಾಜಕೀಯರಂಗ ಎರಡರಲ್ಲಿಯೂ ಜನಮನ ಗೆದ್ದ ನಾಯಕ ಅಂಬರೀಷ್.