ಹೆಚ್ಚೆಚ್ಚು ಸಮಸ್ಯೆಗಳನ್ನು ಸೃಷ್ಟಿಸುತ್ತಿರುವವರೇ ರಾಜಕಾರಣಿಗಳು. ಮೊದಲು ತಮ್ಮನ್ನು ತಾವು ತಿದ್ದಿಕೊಳ್ಳಲಿ ಎಂದು ರಾಜಕಾರಣಿಗಳ ಕಾರ್ಯವೈಖರಿ ಕುರಿತು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಕುಸಿದಿದೆ. ರಾಜಧಾನಿ ಬೆಂಗಳೂರಿನಲ್ಲಿ ಸಮಸ್ಯೆಗಳು ತುಂಬಿ ತುಳುಕುತ್ತಿವೆ. ಕೂಡಿಯುವ ನೀರಿನ ಸಮಸ್ಯೆ ತಲೆದೂರಿದೆ. ಆದರೂ ಸರಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದರು. ಬೆಂಗಳೂರಿನಲ್ಲಿ ಟ್ರಾಪಿಕ್ ಸಮಸ್ಯೆ ನಿಜಕ್ಕೂ ಆತಂಕ