ಹಿರಿಯ ನಟ ಹಾಗೂ ದಿ. ರೆಬೆಲ್ ಸ್ಟಾರ್ ಅಂಬರೀಶ್ ಅವರ ಸಮಾಧಿ ಸ್ಥಳದಲ್ಲಿಂದು ಕುಟುಂಬದ ಸದಸ್ಯರು ಪೂಜೆ ಸಲ್ಲಿಸಿ ಹಾಲು-ತುಪ್ಪ ಹಾಕಿದರು.ಪತ್ನಿ ಸುಮಲತಾ, ಪುತ್ರ ಅಭಿಷೇಕ್ ಸೇರಿದಂತೆ ಕುಟುಂಬದ ಸದಸ್ಯರು ಅಂಬರೀಶ್ ಅವರ ಸಮಾಧಿಗೆ ಪೂಜೆ ಸಲ್ಲಿಸಿ ಚಿತಾಭಸ್ಮವನ್ನು ತೆಗೆದುಕೊಂಡು ಶ್ರೀರಂಗಪಟ್ಟಣದ ಪಶ್ಚಿಮವಾಹಿನಿಯ ಕಾವೇರಿ ನದಿಯಲ್ಲಿ ವಿಸರ್ಜನೆ ಮಾಡಲಾಯಿತು. ಈ ಮೂಲಕ ಅಂಬರೀಶ್ ಅವರ ಅಸ್ತಿ ಸಂಗಮದಲ್ಲಿ ಲೀನವಾಯಿತು.ಇದಕ್ಕೂ ಮುನ್ನ ಬೆಳಿಗ್ಗೆ 9 ಗಂಟೆ ಸುಮಾರಿಗೆ ಕಂಠೀರವ ಸ್ಟುಡಿಯೋಗೆ ಆಗಮಿಸಿದ