ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲೆ ಸಚಿವ ಸಂಪುಟ ವಿಸ್ತರಣೆ ಮಾಡಬೇಕಾದ ಒತ್ತಡ ಹೆಚ್ಚಾಗುತ್ತಿದ್ದು ಸಂಪುಟ ವಿಸ್ತರಣೆಗೆ ಒಪ್ಪಿಗೆ ಪಡೆಯುವ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಆದ್ಯಕ್ಷ ಜೆ.ಪಿ. ನಡ್ಡ ಭೇಟಿ ಮಾಡಿ ಸುದೀರ್ಘವಾದ ಸಮಾಲೋಚನೆ ನಡೆಸಿದ್ದಾರೆ. ಮಾತುಕತೆ ವೇಳೆ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ಕೇಂದ್ರ ಸಂಸದೀಯ ವ್ಯವಹಾರಗಳ ಹಾಗೂ ಗಣಿ ಸಚಿವ ಪ್ರಹ್ಲಾದ್ ಜೋಷಿ ಕೂಡ ಉಪಸ್ಥಿತರಿದ್ದರು. ಹೊಸ ಮಂತ್ರಿ ಮಂಡಳ ಹೇಗಿರಬೇಕು