ಹಾವೇರಿ : ಉದ್ಯೋಗ ಸೃಷ್ಟಿಸುತ್ತೇವೆ ಎಂದು ಅಧಿಕಾರಕ್ಕೆ ಬಂದ ಬಿಜೆಪಿ ನಿರುದ್ಯೋಗ ಸೃಷ್ಟಿಸಿತು. ಯುವಕರೇ ನಿಮ್ಮ ಡಿಗ್ರಿ ಸರ್ಟಿಫಿಕೇಟ್ಗಳನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪೋಸ್ಟ್ ಮಾಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಹಾನಗಲ್ ತಾಲ್ಲೂಕಿನ ಕೆಲವರಕೊಪ್ಪ ಗ್ರಾಮದಲ್ಲಿ ಹಾನಗಲ್ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಪರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಒಂದು ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದು ಬಿಜೆಪಿ ನಾಯಕರು