ಖಾಸಗಿ ಬಸ್ ಪ್ರಯಾಣ ದರದ ವಿಪರೀತ ಏರಿಕೆಯನ್ನು ವಿರೋಧಿಸಿ, ಜಿಲ್ಲಾಡಳಿತದ ಏಕಪಕ್ಷೀಯ ನಿರ್ಧಾರವನ್ನು ಖಂಡಿಸಿ ಜಾತ್ಯಾತೀತ ಪಕ್ಷಗಳ ಹಾಗೂ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟದ ನೇತ್ರತ್ವದಲ್ಲಿ ಮಂಗಳೂರು ನಗರದ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ವಿವಿಧ ಪಕ್ಷಗಳ ಹಾಗೂ ಸಂಘಟನೆಗಳ ಕಾರ್ಯಕರ್ತರು, ಬಸ್ ಮಾಲಕರ ದುರ್ವರ್ತನೆ ಹಾಗೂ ಜನವಿರೋಧಿಯಾಗಿ ವರ್ತಿಸುತ್ತಿರುವ ಜಿಲ್ಲಾಡಳಿತದ ಹಾಗೂ ಜನಪ್ರತಿನಿಧಿಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶವನ್ನು ವ್ಯಕ್ತಪಡಿಸಿದರು. ಸಿಪಿಎಂ