ಮೈಸೂರು : ಬಡತನ ಮುಕ್ತ ಕರ್ನಾಟಕ ಹಾಗೂ ಬಡತನ ಮುಕ್ತ ಭಾರತ ನಮ್ಮ ಪರಿಕಲ್ಪನೆ ಆಗಿದ್ದು, ಅದಕ್ಕಾಗಿ ಹತ್ತು ಹಲವು ಯೋಜನೆಗಳನ್ನು ರೂಪಿಸಲಾಗಿದೆ.ಇದರ ಪ್ರಮುಖ ಭಾಗವಾಗಿಯೇ ಒಂದು ದೇಶ- ರೇಷನ್ ಒಂದು ಪಡಿತರ ಚೀಟಿಯಂಥ ಯೋಜನೆ ಜಾರಿಗೊಳಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.ಮಹಾರಾಜ ಕಾಲೇಜು ಮೈದಾನದಲ್ಲಿ ಸೋಮವಾರ ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ, ನಾಗನಹಳ್ಳಿ ಹೊಸ ಕೋಚಿಂಗ್ ಕಾಂಪ್ಲೆಕ್ಸ್, ಮೈಸೂರು ರೈಲು ನಿಲ್ದಾಣ ಅಭಿವೃದ್ಧಿಗೆ ಶಂಕುಸ್ಥಾಪನೆ ಹಾಗೂ