ವಿದ್ಯುತ್ ತಂತಿ ತಗುಲಿ ಕಾಣಿಸಿಕೊಂಡ ಬೆಂಕಿಯ ಕಿನ್ನಾಲಿಗೆ ಸುಮಾರು 20 ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಬೆಳೆ ಸಂಪೂರ್ಣ ನಾಶಗೊಂಡಿರುವ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕುರುಬಾಳಹುಂಡಿ ಗ್ರಾಮದಲ್ಲಿ ನಡೆದಿದೆ. ಸುಬ್ರಹ್ಮಣ್ಯ ಮತ್ತು ನಾಗ ಎಂಬುವರಿಗೆ ಸೇರಿದ ಕಬ್ಬಿನ ಬೆಳೆ ಬೆಂಕಿಗಾಹುತಿಯಾಗಿದೆ. ಸುಮಾರು 50 ಲಕ್ಷ ರೂಪಾಯಿ ಖರ್ಚು ಮಾಡಿ 20 ಎಕರೆ ಜಮೀನಿನಲ್ಲಿ ಕಬ್ಬು ಬೆಳೆ ಬೆಳೆದಿದ್ದು, ಚೆನ್ನಾಗಿ ಬೆಳೆದು ಕಟಾವಿಗೂ ಬಂದಿತ್ತು. ಅದರಂತೆ ಕಾರ್ಮಿಕರು ಕಬ್ಬು ಕಟಾವು