ಮುಖ್ಯಮಂತ್ರಿಯಾಗಿದ್ದಾಗ ನಡೆದಿದೆ ಎನ್ನಲಾದ ವಿದ್ಯುತ್ ಹಗರಣ ಕುರಿತಂತೆ ಯಾವುದೇ ತನಿಖೆ ಎದುರಿಸಲು ಸಿದ್ದ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ವಿದ್ಯುತ್ ಖರೀದಿಯಲ್ಲಿ 25 ಸಾವಿರ ಕೋಟಿ ರೂಪಾಯಿ ಹಗರಣವಾಗಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ನನ್ನ ವಿರುದ್ಧ ಆರೋಪ ಹೊರಿಸಿದ್ದರು. ಕಾಂಗ್ರೆಸ್ ಪಕ್ಷದ ಸರಕಾರವೇ ಅಧಿಕಾರದಲ್ಲಿದ್ದರೂ ಡಿಕೆಶಿ ಇನ್ನೂ ಸುಮ್ಮನಿರುವುದು ಏಕೆ? ಎಂದು ಗುಡುಗಿದರು. ನಾನು ತಪ್ಪು ಮಾಡಿದ್ದರೆ ನನ್ನ ವಿರುದ್ಧ ಯಾಕೆ ತನಿಖೆ ನಡೆಸುತ್ತಿಲ್ಲ