ಕಾಂಗ್ರೆಸ್ ನಾಯಕರು ಸಾವರ್ಕರ್ರನ್ನು ಗುರಿಯಾಗಿಸಿಕೊಂಡು ನೀಡುತ್ತಿರುವ ಹೇಳಿಕೆಗಳಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದ್ದು, ಕಾಂಗ್ರೆಸ್ನ ಮೊದಲ ಕುಟುಂಬದ ಕೊಡುಗೆಯನ್ನು ಪ್ರಶ್ನಿಸಿದ್ದಾರೆ. ಕೊಡಗಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಪ್ರಹ್ಲಾದ್ ಜೋಶಿ, ಸಿದ್ದರಾಮಯ್ಯ ಆಗಲಿ ಬೇರೆಯವರಿಗೆ ಆಗಲಿ ಮೊಟ್ಟೆ ಎಸೆಯುವುದು ತಪ್ಪು. ಮೊಟ್ಟೆ ಎಸೆದಿದ್ದು ಸರಿಯಲ್ಲ. ಕಪ್ಪು ಧ್ವಜ ಪ್ರದರ್ಶನ ಮಾಡುವವರ ಪರ ನಾನು ಇಲ್ಲ. ಅದು ಸಮರ್ಥನೀಯವಲ್ಲ.