ನವದೆಹಲಿ : ಪಿಎಫ್ಐ ಮೇಲೆ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ಗೆ ಈಗಲೂ ಒಳಗೊಳಗೆ ಪ್ರೀತಿ ಇದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.ಪಿಎಫ್ಐ ಬ್ಯಾನ್ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಸುರಕ್ಷತೆ ವಿಚಾರದಲ್ಲಿ ಬಿಜೆಪಿ ಯಾವತ್ತು ಮತಬ್ಯಾಂಕ್ ರಾಜಕಾರಣ ಮಾಡಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.ಕೇಂದ್ರ ಬಿಜೆಪಿ ಸರ್ಕಾರ ಪಿಎಫ್ಐ ಬ್ಯಾನ್ ಮಾಡಿರುವುದನ್ನು ಕಂಡು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಒಳಗೊಳಗೆ ಕುದಿಯುತ್ತಿದೆ. ಪಿಎಫ್ಐ ಭಯೋತ್ಪಾದಕ ಚಟುವಟಿಕೆಗಳು,