ಜೆಡಿಎಸ್ ಪಕ್ಷದಲ್ಲಿ ಸೂಟ್ಕೇಸ್ ಸಂಸ್ಕ್ರತಿಯಿದೆ ಎಂದು ಹೇಳಿಕೆ ನೀಡಿ ವಿವಾದಕ್ಕೊಳಗಾಗಿದ್ದ ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ, ಇಂದು ಪಕ್ಷದ ಕೆಲ ನಾಯಕರನ್ನು ಬಕೆಟ್ಗಳು ಎಂದು ಹೇಳಿ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿ ಪಕ್ಷದ ಕಾರ್ಯಕರ್ತರು ಆಯೋಜಿಸಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾನು ಬೆಳೆದರೆ ಕೆಲವರಿಗೆ ಅಡ್ಡಿಯಾಗುತ್ತೇನೆ ಎನ್ನುವ ಕಾರಣದಿಂದ ನನ್ನ ಹೇಳಿಕೆಗಳನ್ನು ತಿರುಚಿ ವಿವಾದ ಸೃಷ್ಟಿಸಲಾಗಿತ್ತು ಎಂದು ತಿಳಿಸಿದ್ದಾರೆ. ನಾನು ಇವರೆಗೂ ಬಿದ್ದಿಲ್ಲ, ಬೀಳುವುದು