ಬೆಂಗಳೂರು: ಬಿಜೆಪಿ ನಾಯಕರ ಮೇಲೆ ತಮ್ಮ ವಾಗ್ದಾಳಿ ಮುಂದುವರಿಸಿರುವ ನಟ ಪ್ರಕಾಶ್ ರೈ ಇದೀಗ ನಿನ್ನೆಯಷ್ಟೇ ರಾಜ್ಯಕ್ಕೆ ಬಂದು ಭಾಷಣ ಮಾಡಿರುವ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಕಿಡಿ ಕಾರಿದ್ದಾರೆ. ನಿನ್ನೆ ಸಿಎಂ ಯೋಗಿ ಟಿಪ್ಪು ಸುಲ್ತಾನ್ ಜಯಂತಿ ಆಚರಿಸುವ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದರು. ಟಿಪ್ಪು ಜಯಂತಿ ಆಚರಿಸುವ ಬದಲು ಹನುಮಾನ್ ಜಯಂತಿ ಆಚರಿಸಿ ಎಂದು ಕರೆ ನೀಡಿದ್ದರು.ಇದಕ್ಕೆ ಪ್ರಕಾಶ್ ರೈ ತೀವ್ರ ಆಕ್ಷೇಪ