ಗೀತಾ ವಿಷ್ಣು ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಣವ್ ದೇವರಾಜ್ ಪೊಲೀಸ್ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆ ಬಳಿಕ ಮಾತನಾಡಿದ ಅವರು, ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ್ದ ಹಿನ್ನೆಲೆ ವಿಚಾರಣೆಗೆ ಕರೆಸಿದ್ದರು ಎಂದು ಹೇಳಿದ್ದಾರೆ. ಜಯನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾದ ಪ್ರಣವ್ ದೇವರಾಜ್, ಅಪಘಾತಕ್ಕೂ ಮುನ್ನ ಗೀತಾ ವಿಷ್ಣು ಜೊತೆ ಊಟ ಮಾಡಿದ್ದೆವು. ಅಪಘಾತದ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ್ದು, ಸ್ಥಳಕ್ಕೆ ಹೋಗಿದ್ದರಿಂದ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು.