ಬಿಜೆಪಿ ಸಂಸದ ಪ್ರತಾಪ್ ಸಿಂಹರನ್ನು ಇಂದು ಸಂಜೆಯೊಳಗೆ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಚ್ಚರಿಸಿದ್ದಾರೆ. ಹನುಮಾನ ಜಯಂತಿ ಮೆರವಣಿಗೆ ಸಂದರ್ಭದಲ್ಲಿ ಪೊಲೀಸರ ಬ್ಯಾರಿಕೇಡ್ ಮೇಲೆ ಕಾರು ಹತ್ತಿಸಿ ಮಹಿಳಾ ಪೊಲೀಸ್ ಅಧಿಕಾರಿಯನ್ನು ಪ್ರಾಣಾಪಾಯಕ್ಕೆ ಸಿಲುಕಿಸಿದ ಪ್ರತಾಪ್ ಸಿಂಹ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆ. ಸಿಎಂ ಸಿದ್ದರಾಮಯ್ಯ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಇಂದು ಪ್ರತಾಪ್ ಸಿಂಹರನ್ನು ಬಿಡುಗಡೆ ಮಾಡದಿದ್ದಲ್ಲಿ ನಾಳೆ ಹುಣಸೂರು ಬಂದ್ಗೆ