ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮೆಚ್ಚಿಸಲು ಮೈಸೂರು ಸಂಸದ ಪ್ರತಾಪ್ ಸಿಂಹ್ ಇಂತಹ ಡ್ರಾಮಾ ಮಾಡಿದ್ದಾರೆ. ಇದರಿಂದ ಸಾಮಾನ್ಯ ಜನತೆಗೆ ಎಷ್ಟು ತೊಂದರೆಯಾಗಿದೆ ಎನ್ನುವ ಅರಿವಿದೆಯಾ ಪ್ರತಾಪ? ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಕೆಲ ತಿಂಗಳುಗಳ ಹಿಂದೆ ರಾಜ್ಯಕ್ಕೆ ಆಗಮಿಸಿದಾಗ ಬೈದಿದ್ದರಿಂದ ಅವರನ್ನು ಮೆಚ್ಚಿಸಲು ಪ್ರತಾಪ್ ಸಿಂಹ ಉದ್ಧಟತನದ ವರ್ತನೆ ತೋರಿದ್ದಾರೆ ಎಂದು ಕಿಡಿಕಾರಿದ್ದಾರೆ. ಬಿಜೆಪಿ