ಅದು ಕರಾವಳಿಯಲ್ಲಿ ಕಿಚ್ಚು ಹಚ್ಚಿದಂತಹ ಕೊಲೆ ಪ್ರಕರಣ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರುನನ್ನ ಭೀಕರವಾಗಿ ಹತ್ಯೆಗೈಯಲಾಗಿತ್ತು. ಕೊಲೆ ನಡೆದು ಎಂಟು ತಿಂಗಳಾದ್ರು,ಅದರ ಸಂಚುಕೋರ ಮಾತ್ರ ಇನ್ನೂ ಸಿಕ್ಕಿರಲಿಲ್ಲ.ಅದ್ರೆ ನಿನ್ನೆ ನಡೆದ ಮಿಂಚಿನ ಕಾರ್ಯಾಚರಣೆಯಲ್ಲಿ ಬೆಂಗಳೂರಿನಲ್ಲೆ ಆರೋಪಿ ಸಿಕ್ಕಿ ಬಿದ್ದಿದ್ದಾನೆ.ದಕ್ಷಿಣ ಕನ್ನಡ ಜಿಲ್ಲೆ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಕಡೆಗೂ ಎನ್ಐಎ ಬಲೆಗೆ ಬಿದ್ದಿದ್ದಾನೆ. ಕಳೆದ ಎಂಟು ತಿಂಗಳಿಂದ ತಲೆಮರೆಸಿಕೊಂಡಿದ್ದ ಮಡಿಕೇರಿ ಮೂಲದ