ಶಿವೈಕ್ಯರಾಗಿರುವ ಶಿವಕುಮಾರ ಸ್ವಾಮೀಜಿಗೆ ರಾಜ್ಯದೆಲ್ಲೆಡೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತಿದೆ.ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ವೈದ್ಯನಾಥಪುರ ಶ್ರೀಕದಂಬ ಜಂಗಮ ಮಠ ನಡೆದಾಡುವ ದೇವರಗೆ ಶ್ರದ್ಧಾಂಜಲಿ ಅರ್ಪಣೆ ಮಾಡಲಾಯಿತು.ಕದಂಬ ಜಂಗಮ ಮಠದ ಶ್ರೀ ರೇಣುಕಾ ಶಿವಾಚಾರ್ಯ ಸ್ಚಾಮೀಜಿ ನೇತೃತ್ವದಲ್ಲಿ ಶ್ರದ್ಧಾಂಜಲಿ ನಡೆಯಿತು.ಡಾ.ಶಿವಕುಮಾರ ಸ್ವಾಮೀಜಿ ಅವರ ಅಗಲಿಕೆ ತುಂಬಲಾರದ ನಷ್ಟವಾಗಿದೆ. ಅಕ್ಷರದಾಸೋಹ, ವಿದ್ಯಾದಾನದ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳ ಪಾಲಿಗೆ ದಾರಿದೀಪ ಆಗಿದ್ದರು. ಅವರ ಸೇವೆಗೆ ಸರಿಸಾಟಿ ಮತ್ತೊಬ್ಬರಿಲ್ಲ ಎಂದು ಸ್ವಾಮೀಜಿ ಹೇಳಿದರು.ಶಿವಕುಮಾರ್ ಸ್ವಾಮೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಬಳಿಕ ಶಿವಾಚಾರ್ಯ