ಬಿಬಿಎಂಪಿ ಚುನಾವಣೆಗೆ ಆಯೋಗ ಸಿದ್ದತೆ ಮಾಡಿಕೊಂಡಿದೆ.ಮತದಾರರ ಪಟ್ಟಿ, ಮತಗಟ್ಟೆಗಳ ಕುರಿತು ಚರ್ಚೆ ನಡೆಸಲಾಗಿದ್ದು,ಶೀಘ್ರದಲ್ಲಿ ಬಿಬಿಎಂಪಿ ಚುನಾವಣೆಗೆ ದಿನಾಂಕ ನಿಗದಿಯಾಗುವ ಬಹುತೇಕ ಸಾಧ್ಯತೆ ಇದೆ. ಬಿಬಿಎಂಪಿ ಚುನಾವಣೆ ಹಿನ್ನೆಲೆ ನಾಳೆ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಲಿದೆ.ಬಿಬಿಎಂಪಿ ಸಾರ್ವತ್ರಿಕ ಚುನಾವಣೆಯ ಪೂರ್ವ ಸಿದ್ಧತೆ ಕುರಿತು ಆ.20ರ ಶನಿವಾರ ಸಭೆ ಮಾಡಲಾಗಿತ್ತು.ಈಗ ಚುನಾವಣೆಯ ಪೂರ್ವ ಸಿದ್ಧತೆ ಕುರಿತು ರಾಜ್ಯ ಚುನಾವಣಾ ಆಯೋಗವು ತೀರ್ಮಾನ ತೆಗೆದುಕೊಳ್ಳಲಿದೆ.ಸಭೆಯಲ್ಲಿ ಪಾಲಿಕೆ ಮುಖ್ಯ ಆಯುಕ್ತರು, ಬೆಂಗಳೂರು