ಪಿ.ಯು.ಸಿ ವಿದ್ಯಾರ್ಥಿಗಳಿಗೆ ಜುಲೈ 30 ಹಾಗೂ 31 ರಂದು ನಡೆಸಲಿರುವ ಸಿ.ಇ.ಟಿ. ಪರೀಕ್ಷೆಗೆ ಸಿದ್ಧತೆ ನಡೆಯುತ್ತಿದೆ. ಸಿಇಟಿಯನ್ನು ಸುವ್ಯವಸ್ಥಿತವಾಗಿ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಉನ್ನತ ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ ಸೂಚಿಸಿದ್ದಾರೆ.ಸಿ.ಇ.ಟಿ. ಪರೀಕ್ಷೆ ಕುರಿತು ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ಪರೀಕ್ಷೆ ಮುಗಿದ ನಂತರ ಉತ್ತರ ಪತ್ರಿಕೆಯನ್ನು ಖಜಾನೆಗೆ ತಲುಪಿಸುವಂತೆ ಎಲ್ಲಾ ಪರೀಕ್ಷಾ ಕೇಂದ್ರಗಳಿಗೂ ನೋಡೆಲ್ ಆಫೀಸರ್ ಮತ್ತು