ಕರ್ನಾಟಕದ ಮೂಲೆ ಮೂಲೆಗಳಿಂದ ಅಪ್ಪು ಅಭಿಮಾನಿಗಳು ‘ಪುನೀತ ಪರ್ವ’ ಕಾರ್ಯಕ್ರಮಕ್ಕೆ ಬರಲಿದ್ದಾರೆ. 5 ಲಕ್ಷಕ್ಕೂ ಅಧಿಕ ಜನರು ಆಗಮಿಸುವ ಸಾಧ್ಯತೆ ಇದೆ. ಪುನೀತ್ ರಾಜ್ಕುಮಾರ್ ಅವರ ಕನಸಿನ ಪ್ರಾಜೆಕ್ಟ್ ‘ಗಂಧದ ಗುಡಿ’ ಬಿಡುಗಡೆಗೆ ಸಜ್ಜಾಗಿದೆ. ಈ ಸಾಕ್ಷ್ಯಚಿತ್ರವನ್ನು ಅದ್ದೂರಿಯಾಗಿ ಬಿಡುಗಡೆ ಮಾಡಲು ಸಕಲ ಸಿದ್ಧತೆ ನಡೆದಿದೆ. ಇದು ಪುನೀತ್ ರಾಜ್ಕುಮಾರ್ ಅವರ ಕೊನೆಯ ಚಿತ್ರ. ಹಾಗಾಗಿ ಇದನ್ನು ವಿಶೇಷ ರೀತಿಯಲ್ಲಿ ಬರಮಾಡಿಕೊಳ್ಳಲು ಅಪ್ಪು ಅಭಿಮಾನಿಗಳು ಕಾದಿದ್ದಾರೆ. ಅಕ್ಟೋಬರ್ 28ರಂದು ‘ಗಂಧದ