ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯ ಕ್ಷೇತ್ರ ಕೊಡಗಿನ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ರಾತ್ರಿ 1 ಗಂಟೆ 27 ನಿಮಿಷಕ್ಕೆ ಕಾವೇರಿ, ತೀರ್ಥರೂಪಿಣಿಯಾಗಿ ಆವಿರ್ಭವಿಸಲಿದ್ದಾಳೆ. ಕರ್ಕಾಟಕ ಲಗ್ನ ತುಲಾ ಸಂಕ್ರಮಣ ಪುಣ್ಯ ಕಾಲದಲ್ಲಿ ತೀರ್ಥೋದ್ಭವ ನಡೆಯಲಿದೆ. ಜೀವ ನದಿಯನ್ನ ಕಣ್ತುಂಬಿಸಿಕೊಳ್ಳಲು ಸಹಸ್ರಾರು ಮಂದಿ ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ತುಲಾ ಮಾಸದ ಮೊದಲ ದಿನ ಅಂದರೆ ತುಲಾ ಸಂಕ್ರಮಣದ ದಿನ ಪ್ರತಿ ವರ್ಷ ಕಾವೇರಿ ಕೊಡಗಿನ