ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳ 27ರಂದು ಬೆಳಿಗ್ಗೆ 9.30ಕ್ಕೆ ರಾಜ್ಯದ 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ವಚ್ರ್ಯುವಲ್ ಮೂಲಕ ನೇರ ಸಂವಾದ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.ಮಲ್ಲೇಶ್ವರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 58,112 ಬೂತ್ಗಳಲ್ಲಿ, 1,680 ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ಈ ಸಂವಾದವನ್ನು ಹಮ್ಮಿಕೊಳ್ಳಲಾಗಿದೆ.