ಬರಗಾಲದ ಸೇರಿದಂತೆ ರಾಜ್ಯ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಪ್ರಧಾನಿಯವರು ಸಮಯ ನೀಡದಿರುವುದು ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಯಲ್ಲಿ ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಮಾಜಿ ಮುಖ್ಯಮಂತ್ರಿ ದಿವಂಗತ ನಿಜಲಿಂಗಪ್ಪ ಅವರ ಜನ್ಮದಿನದ ಅಂಗವಾಗಿ ವಿಧಾನಸೌಧ ಆವರಣದಲ್ಲಿನ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಬಳಿಕ ಮುಖ್ಯಮಂತ್ರಿಯವರು ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಭೀಕರ ಬರಗಾಲವಿದೆ, ಪರಿಹಾರ ಕಾಮಗಾರಿಗಳಿಗೆ ಕೇಂದ್ರದ ನೆರವು ಅಗತ್ಯವಿದೆ. ಇದನ್ನು ಹೇಳಿಕೊಳ್ಳಲು ಒಂದು ರಾಜ್ಯದ