ಮಧ್ಯಪ್ರದೇಶ, ರಾಜಸ್ಥಾನ ಮತ್ತು ಚತ್ತೀಸ್ಗಢ್ ರಾಜ್ಯಗಳಲ್ಲಿ ನಡೆದಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲು ಪ್ರಧಾನಿ ಮೋದಿಯವರ ದೂರದೃಷ್ಟಿಯೇ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಪ್ರಧಾನಿ ಮೋದಿಯವರಿದೆ ದೇಶವನ್ನೇ ಅಲ್ಲ ವಿಶ್ವವನ್ನೇ ಆಳುವ ಸಾಮರ್ಥ್ಯ ಹೊಂದಿದ್ದಾರೆ. ಅವರ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಹ್ಯಾಟ್ರಿಕ್ ದಾಖಲೆ ನಿರ್ಮಿಸಿ ಮತ್ತೆ ಪ್ರಧಾನಿ ಹುದ್ದೆ ಅಲಂಕರಿಸಲಿದ್ದಾರೆ ಎಂದು ಭವಿಷ್ಯ ನುಡಿದರು.