ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ (ಇಂದು) ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಮಂಡ್ಯ ಮತ್ತು ಧಾರವಾಡದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 11:10ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಪ್ರಧಾನಿ ಮೋದಿ ಮಂಡ್ಯಗೆ ತೆರಳಿ, ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆ ಮಾಡಲಿದ್ದಾರೆ. ಮಂಡ್ಯದ ಅಮರಾವತಿ ಹೋಟೆಲ್ ಬಳಿ ಎಕ್ಸ್ಪ್ರೆಸ್ ಹೈವೇಯಲ್ಲಿ ಮಧ್ಯಾಹ್ನ 11:40ಕ್ಕೆ ಹೆದ್ದಾರಿ ಲೋಕಾರ್ಪಣೆಗೊಳ್ಳಲಿದೆ. ಎಕ್ಸ್ಪ್ರೆಸ್ವೇ ಉದ್ಘಾಟನೆ ಬಳಿಕ ಮೋದಿ ಅವರು ಮಂಡ್ಯದಲ್ಲಿ 1.8 ಕಿಮೀ