ಬೆಂಗಳೂರು: ಬೆಂಗಳೂರಿನಲ್ಲಿಂದು ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಮಾರೋಪದ ರ್ಯಾಲಿ ನಡೆಯಲಿದೆ. ಮಧ್ಯಾಹ್ನ 3.55ಕ್ಕೆ ಹೆಲಿಕಾಪ್ಟರ್ ಮೂಲಕ ಹೆಬ್ಬಾಳ ಏರ್ ಫೋರ್ಸ್ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ ಮೋದಿ. ಸಂಜೆ 4ಕ್ಕೆ ಅರಮನೆ ಮೈದಾನದ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಅರಮನೆ ಮೈದಾನದಲ್ಲಿ ದಕ್ಷಿಣಾಭಿಮುಖ ವೇದಿಕೆಯಲ್ಲಿ ಭಾಷಣ ಮಾಡಲಿದ್ದಾರೆ. ಸಂಜೆ 5.35ಕ್ಕೆ ಎಚ್.ಎ.ಎಲ್ ಏರ್ ಪೋರ್ಟ್ ನಿಂದ ದೆಹಲಿಗೆ ಮರಳಿ ಪ್ರಯಾಣಿಸಲಿದ್ದಾರೆ. ಇನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಪೊಲೀಸರಿಂದ