ಮೈಸೂರು : ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಭಾನುವಾರ(ಇಂದು) ರಾತ್ರಿ ಮೈಸೂರಿಗೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನಲೆಯಲ್ಲಿ ಅವರು ಸಂಚರಿಸುವ ಮಾರ್ಗದಲ್ಲಿ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಭಾನುವಾರ ರಾತ್ರಿ ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ರ್ಯಾಡಿಸನ್ ಬ್ಲೂ ಹೊಟೇಲ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸೋಮವಾರ ಬೆಳಗ್ಗೆ ಹೊಟೇಲ್ನಲ್ಲಿಯೇ ವಿಡಿಯೋ ಕಾನ್ಫರೆನ್ಸ್ ನಡೆಸಿ ನಂತರ ಹೆಲಿಪ್ಯಾಡ್