ಪ್ರಧಾನಮಂತ್ರಿ ಮೋದಿಯದ್ದು ಬಾಯಿಬಾಡಾಯಿ ಸಾಧನೆ ಮಾತ್ರ ಶೂನ್ಯ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಆಯೋಜಿಸಲಾದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿದ ನಂತರ ದೇಶದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಅಚ್ಚೇ ದಿನ್ಗಾಗಿ ಜನತೆ ಇನ್ನೂ ಕಾಯುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್ ಪಕ್ಷದವರನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆಯುತ್ತಿವೆ. ವಿಪಕ್ಷಗಳನ್ನು ವ್ಯವಸ್ಥಿತವಾಗಿ ತುಳಿಯುವ ಷಡ್ಯಂತ್ರ ನಡೆಯುತ್ತಿದೆ. ನೋಟ್ಬ್ಯಾನ್ ಮಾಡಿ ದೇಶದ ಆರ್ಥಿಕ ವ್ಯವಸ್ಥೆಯನ್ನು ಹದಗೆಡಿಸಿದ್ದಾರೆ