ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ನೀಡಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ 2ನೇ ದಿನವಾದ ಇಂದೂ ಮುಂದುವರೆದಿದೆ.ದಾವಣಗೆರೆ ನಗರದ ಗಡಿಯಾರ ಕಂಬದ ಬಳಿ ವಿವಿಧ ಸಂಘಟನೆಗಳು ಬಹಿರಂಗ ಸಭೆ ನಡೆಸಿ ಕೇಂದ್ರಸರ್ಕಾರದ ವಿರುದ್ದ ಘೋಷಣೆಗಳು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಎಐಟಿಯುಸಿ ಕಾರ್ಮಿಕ ಸಂಘಟನೆಯವರು ನಗರದ ಜಯದೇವವೃತ್ತದಲ್ಲಿ ಪ್ರತಿಭಟನೆ ನಡೆಸಿ ಪ್ರಧಾನಮಂತ್ರಿ ನರೇಂದ್ರಮೋದಿಯವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಕಾರ್ಮಿಕರು