ಬೆಂಗಳೂರು : ಬಿಜೆಪಿ-ಜೆಡಿಎಸ್ ಒಳ ಒಪ್ಪಂದ ಆಗಿದೆ ಎಂದು ಶಾಸಕ ಪ್ರೀತಂ ಗೌಡ ನೀಡಿದ್ದ ಹೇಳಿಕೆಗೆ ಸಚಿವ ಅಶ್ವಥ್ ನಾರಾಯಣ್ ವಿರೋಧ ವ್ಯಕ್ತಪಡಿಸಿದ್ದಾರೆ. ಪ್ರೀತಂ ಗೌಡರ ಹೇಳಿಕೆ ಖಂಡನೀಯ. ಬೇಜವಾಬ್ದಾರಿಯಿಂದ ಕೂಡಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೂ ಸಹ ಈ ತರಹದ ಹೇಳಿಕೆಗಳನ್ನ ನೀಡಬಾರದು. ಇದು ತಪ್ಪು ಸಂದೇಶ ರವಾನೆ ಮಾಡುತ್ತೆ. ಜೆಡಿಎಸ್ ಅಥವಾ ಕಾಂಗ್ರೆಸ್ ಇಬ್ಬರೂ ಸಹ ಬಿಜೆಪಿ ಪ್ರತಿಸ್ಪರ್ಧಿಗಳು. ಮೋದಿ ಹೆಸರು