ಖಾಸಗಿ ಬಸ್ ಉರುಳಿ 25ಕ್ಕೂ ಹೆಚ್ಚು ಸಾವನ್ನಪ್ಪಿರುವ ಘಟನೆಗೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.ಕಲಬುರಗಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಬಸ್ ದುರಂತಕ್ಕೆ ಈಡಾಗಿರುವುದು ದುರ್ದೈವದ ಸಂಗತಿಯಾಗಿದೆ. ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯದಿಂದ ಬಸ್ ನಾಲೆಗೆ ಉರುಳಿದೆ. ಘಟನೆಯಲ್ಲಿ 25ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು, ತಮಗೆ ದೊಡ್ಡ ಆಘಾತವುಂಟು ಮಾಡಿದೆ ಎಂದು ಹೇಳಿದ್ದಾರೆ.ದುರ್ಘಟನೆಯಿಂದ ಸಾವಿಗೀಡಾದವರ ಕುಟುಂಬಸ್ಥರಿಗೆ ತುಂಬಲಾರದ ನೋವಾಗಿದೆ. ಮೃತರ ಕುಟುಂಬದವರಿಗೆ ದುಃಖ ಸಹಿಸುವ ಶಕ್ತಿಯನ್ನು ದೇವರು