ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಇತ್ತ ಅಂಬಾವಿಲಾಸ ಅರಮನೆಯಲ್ಲಿ ವೈಭವೋಪೇತ ಖಾಸಗಿ ದರ್ಬಾರ್ನ್ನು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆರಂಭಿಸಿದರು. ನವರಾತ್ರಿ ಸಂಭ್ರಮ ಇಂದಿನಿಂದ ಆರಂಭವಾಗಿದ್ದು, ಅರಮನೆಯಲ್ಲಿ ಖಾಸಗಿ ದರ್ಬಾರ್ ಶುರುವಾಗಿದೆ. ಅದರಂತೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗೆ ಆರತಿ ಎತ್ತಿ ಎಣ್ಣೆ ಶಾಸ್ತ್ರ ಮಾಡಿ, ಅರಮನೆಗೆ ಬರುವ ಕ್ಷೌರಿಕರಿಂದ ಚೌಲ ಮಾಡಿಸಿ ನಂತರ ಮಂಗಳಸ್ನಾನ ಮಾಡಿಸಲಾಯಿತು. ಮುತ್ತೈದೆಯರು ಮತ್ತು ಪುರೋಹಿತ ಮನೆತನದ ಹೆಂಗಸರು ಆರತಿ ಬೆಳಗಿದರು.