ಬೆಂಗಳೂರು : ಸಾರಿಗೆ ನೌಕರರ ಪ್ರತಿಭಟನೆಯ ಬಳಿಕ ಇದೀಗ ಖಾಸಗಿ ಶಾಲಾ ಶಿಕ್ಷಕರು ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಕೊರೊನಾ ವೇಳೆ ಶಿಕ್ಷಕರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಮೌರ್ಯ ಸರ್ಕಲ್ ನಿಂದ ಫ್ರೀಡಂ ಪಾರ್ಕ್ ವರೆಗೆ ರ್ಯಾಲಿ ನಡೆಸುತ್ತಿದ್ದಾರೆ. ಅನುದಾನ ರಹಿತ ಶಾಲಾಶಿಕ್ಷಕರು, ಖಾಸಗಿ ಪ್ರಾಥಮಿಕ-ಪ್ರೌಢಶಾಲೆಗಳ ಒಕ್ಕೂಟ ತಟ್ಟೆ ಬಡಿದು , ತರಕಾರಿ ಮಾರುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಖಾಸಗಿ ಶಾಲೆಗಳಿಗೆ ವಿಶೇಷ