ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಖಂಡಿಸಿ ಕನ್ನಡ ಪರ ಸಂಘಟನೆಗಳು ವಿನೂತನ ಪ್ರತಿಭಟನೆ ನಡೆಸಿದ್ರು. ಕರ್ನಾಟಕ ಹಾಲು ಮಹಾಮಂಡಳದ ಉತ್ಪನ್ನ ನಂದಿನಿಯನ್ನು ಗುಜರಾತ್ ನ ಅಮೂಲ್ ಜೊತೆಗೆ ವಿಲೀನ ಮಾಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಸರಿಯಿಲ್ಲ ಎಂದು ನಂದಿನಿ ಉತ್ಪನ್ನಗಳ ಹಿಡಿದು ಕನ್ನಡ ಪರ ಸಂಘಟನೆಗಳು ಪ್ರತಿಭಟಿಸಿದ್ರು.