ಬೆಂಗಳೂರು : ಪ್ರೋ.ಎಂ.ವಿ ರಾಜೀವ್ ಗೌಡ ಅವರನ್ನು ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆಯ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ರಾಜ್ಯ ಸರ್ಕಾರ ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ ರಾಜ್ಯ ಯೋಜನಾ ಮಂಡಳಿ ಎಂಬ ಹೆಸರಿನಲ್ಲಿ ಅಸ್ತಿತ್ವದಲ್ಲಿದ್ದ ಸಂಸ್ಥೆಗೆ ಈಗ ರಾಜ್ಯ ಪರಿವರ್ತನಾ ಸಂಸ್ಥೆ ಎಂದು ಮರು ನಾಮಕರಣ ಮಾಡಲಾಗಿದೆ. ಇದು ಕರ್ನಾಟಕದ ಪಾಲಿಗೆ ನೀತಿ ಆಯೋಗದ ಹೊಣೆಗಾರಿಕೆಗೆ ಸಮಾನವಾಗಿದೆ. ರಾಜೀವ್ ಗೌಡ ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ