ಬೆಂಗಳೂರು : ಸಿದ್ದಗಂಗಾ ಶ್ರೀಗಳು ಲಿಂಗೈಕ್ಯರಾದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚರಣೆ ಘೋಷಿಸಿದ್ದರೂ ಕೂಡ ಸಮಾಜ ಕಲ್ಯಾಣ ಇಲಾಖೆ ಹಮ್ಮಿಕೊಂಡಿರುವ ಸಂವಿಧಾನ ಸಂಬಾಷಣೆ ಕಾರ್ಯಾಗಾರ ಯಥಾಪ್ರಕಾರ ನಡೆದಿದೆ. ಬೆಳಗ್ಗೆ 10.30ಕ್ಕೆ ಸಂವಿಧಾನ ಕುರಿತ ಈ ಸಂವಾದ ಕಾರ್ಯಾಗಾರ ಬೆಂಗಳೂರಿನ ಅಶೋಕ ಹೋಟೆಲ್ ನಲ್ಲಿ ಆಯೋಜಿಸಿದ್ದು, ಮಾಜಿ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಭಾಷಣ ಮಾಡಿದ್ದಾರೆ. ಕಾರ್ಯಕ್ರಮ ಪ್ರಾರಂಭಕ್ಕೂ ಮೊದಲು ಶ್ರೀಗಳಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.