ಕೊಡಗು ಜಿಲ್ಲೆಯಲ್ಲಿ ಮೊಟ್ಟೆ ಕೇಸ್ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದರಿಂದಾಗಿ ಬಿಜೆಪಿ ಜಿಲ್ಲಾ ಸಮಾವೇಶ ಹಮ್ಮಿಕೊಂಡಿರುವ ದಿನವೇ ಕಾಂಗ್ರೆಸ್ ಸಹ `ಮಡಿಕೇರಿ ಚಲೋ’ ಪ್ರತಿಭಟನೆ ಹಮ್ಮಿಕೊಂಡಿತ್ತು.ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ನಾಳೆಯಿಂದ ಆ.27ರ ಸಂಜೆ 6 ಗಂಟೆವೆರೆಗ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಈ 4 ದಿನಗಳ ಕಾಲ ಮದ್ಯ ಮಾರಾಟವನ್ನೂ ನಿಷೇಧಿಸಲಾಗಿದೆ. ಇದೇ ವೇಳೆ ದೊಡ್ಡಬಳ್ಳಾಪುರ ಜಿಲ್ಲಾ ಕೇಂದ್ರದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರು ಹಾಗೇ ಮುಂದುವರಿಯಬೇಕು.