ಕೊಪ್ಪಳ : ಗುಂಪು ಘರ್ಷಣೆಗೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮ ಬೆಚ್ಚಿಬಿದ್ದಿದೆ.ಕ್ಷುಲ್ಲಕ ಕಾರಣಕ್ಕೆ ನಡೆದ ಗುಂಪು ಘರ್ಷಣೆಯಲ್ಲಿ ಯಂಕಪ್ಪ(60) ಮತ್ತು ಭಾಷಾವಲಿ(22) ಮೃತಪಟ್ಟಿದ್ದು, ಧರ್ಮಣ್ಣ ಹರಿಜನ್ ಗಂಭೀರವಾಗಿ ಗಾಯಗೊಂಡು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಮುಸ್ಲಿಂ ಸಮುದಾಯದ ಹುಡುಗಿಯರನ್ನು ಎಸ್.ಟಿ ಸಮುದಾಯದವರು ಮದುವೆಯಾಗಿದ್ದಾರೆ ಎಂಬ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ.ಸದ್ಯ ಎರಡು ಗುಂಪುಗಳ ನಡುವೆ ನಡೆದ ಗಲಾಟೆಗೆ ಇಡೀ ಗ್ರಾಮವೇ ಬೂದಿ ಮುಚ್ಚಿದ ಕೆಂಡದಂತಿದೆ. ಗ್ರಾಮದಲ್ಲಿ