ವಿಧಾನ ಸಭೆ ಚುನಾವಣಾ ದಿನಾಂಕ ಘೋಷಣೆ ಆದ ಬಳಿಕ ಸಿಎಂ ಸಿದ್ದರಾಮಯ್ಯ ತಮ್ಮ ತವರು ಜಿಲ್ಲೆಯತ್ತ ಮುಖ ಮಾಡಿದ್ದಾರೆ. ಚುನಾವಣೆ ಪ್ರಚಾರಕ್ಕಾಗಿ ಇಂದಿನಿಂದ ಐದು ದಿನಗಳ ಕಾಲ ಮೈಸೂರಿನಲ್ಲಿ ಠಿಕಾಣಿ ಹೂಡಲಿದ್ದಾರೆ. ಶತಾಯಗತಾಯ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ಸಿಎಂ ಸಿದ್ದರಾಮಯ್ಯ ತವರು ರಾಜಕಾರಣಕ್ಕೆ ಸಂಪೂರ್ಣ ಸಮಯ ಮೀಸಲಿಟ್ಟು ಅಬ್ಬರದ ಪ್ರಚಾರ ಮಾಡಲಿದ್ದಾರೆ. ಚಾಮುಂಡೇಶ್ಚರಿ ಕ್ಷೇತ್ರದಲ್ಲಿ ಮತ ಬೇಟೆಗೆ ಭರ್ಜರಿ ಪ್ಲಾನ್ ಮಾಡ್ಕೊಂಡಿದ್ದಾರೆ. ಐದು ದಿನಗಳ ಕಾಲ ಚಾಮುಂಡೇಶ್ವರಿ