ಚಿತ್ರದುರ್ಗ : ಪಕ್ಷಾಂತರದ ಸಾಧಕ ಬಾಧಕ ಚುನಾವಣೆ ಬಳಿಕ ತಿಳಿಯಲಿದೆ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಜಗದೀಶ್ ಶೆಟ್ಟರ್ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಚಿತ್ರದುರ್ಗ ತಾಲೂಕಿನ ಕ್ಯಾದಿಗ್ಗೆರೆ ಬಳಿಯ ಹೆಲಿಪ್ಯಾಡ್ಗೆ ಆಗಮಿಸಿದ್ದ ಹೆಚ್ಡಿಕೆ ಮಾಜಿ ಎಂಎಲ್ಸಿ ರಘು ಆಚಾರ್ ನಿವಾಸಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ವೇಳೆ ಪಕ್ಷಾಂತರ ಸಹಜವಾಗಿ ನಡೆಯುತ್ತದೆ. ಆದರೆ ಅದರ ಸಾಧಕ