ಕಾರ್ಕಳ ಭಾಗದಲ್ಲಿ ಸಕ್ರಿಯವಾಗಿದ್ದ ಗೋಕಳ್ಳರ ತಂಡವನ್ನು ಬೆನ್ನಟ್ಟಿದ ಪೊಲೀಸರು ಗೋ ಸಾಗಾಟ ಮಾಡುತ್ತಿದ್ದ ವಾಹನ ಸೇರಿ 14 ಗೋವುಗಳು ವಶಕ್ಕೆ ಪಡೆದಿದ್ದಾರೆ. ಹೆಬ್ರಿ ಇನ್ಸ್ಪೆಕ್ಟರ್ ಸುದರ್ಶನ್ ದೊಡ್ಡಮನೆ ನೇತೃತ್ವದಲ್ಲಿ ಭಾರೀ ಕಾರ್ಯಾಚರಣೆ ನಡೆಸಿದ್ದು, ಗೋ ಸಾಗಾಟಗಾರರನ್ನು ಸಿನಿಮೀಯ ರೀತಿಯಲ್ಲಿ ಪೊಲೀಸರು ಬೆನ್ನಟ್ಟಿದ್ರು. ಈ ವೇಳೆ ಗೋಕಳ್ಳರ ವಾಹನ ಅಂಗಡಿಯೊಂದಕ್ಕೆ ಡಿಕ್ಕಿಯಾದ ಹಿನ್ನೆಲೆ ವಾಹನವನ್ನು ಸ್ಥಳದಲ್ಲೇ ಬಿಟ್ಟು ಗೋಕಳ್ಳರು ಪರಾರಿಯಾಗಿದ್ದಾರೆ. ಪರಾರಿಯಾದ ಗೋಕಳ್ಳರು ಮಂಗಳೂರು ಮೂಲದವರಾಗಿರುವ ಸಾಧ್ಯತೆ ಇದೆ ಎಂದು ಶಂಕೆ